ಸುಳ್ಯ: ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ್ ನೇತೃತ್ವದಲ್ಲಿ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಪ್ರಗತಿ ಪರಿಶೀಲನಾ ಸಭೆ ಆ.16ರಂದು ನಡೆಯಿತು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ
ಪ್ರಗತಿ, 15ನೇ ಹಣಕಾಸು ಯೋಜನೆ ಪ್ರಗತಿ,ಆಡಿಟ್ ತಿರುವಳಿ, ಸ್ವಚ್ಛ ಭಾರತ್ ಮಿಷನ್, ವಸತಿ ಯೋಜನೆಯ ಪ್ರಗತಿ, ಅಮೃತ ಗ್ರಾಮ ಪಂಚಾಯತ್, ಜಲಜೀವನ್ ಮಿಷನ್ ಕಾಮಗಾರಿ ಕುರಿತು, ತೆರಿಗೆ ವಸೂಲಾತಿ ಪ್ರಗತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಪಟ್ಟು ಇತರ ವಿಷಯಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರುಕ್ಕು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.