ಕಲ್ಲುಗುಂಡಿ:ಕಲ್ಲುಗುಂಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆರ್.ಎಂ.ಎಸ್.ಪ್ರೌಢಶಾಲೆಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಂ.ಪಿ.ಜ್ಞಾನೇಶ್ ಅವರು ಬಿಸಿಯೂಟ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಜೊತೆಗೆ
ಬಿಸಿಯೂಟದಲ್ಲಿ ತರಕಾರಿಯಲ್ಲಿ ಯಾವ ಅರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂದು ಕೇಳಿದರು.ಮಕ್ಕಳ ಪೌಷ್ಟಿಕ ಆಹಾರ.ಬಿಸಿಯೂಟ ಪ್ರಗತಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ.ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಉಪಾಧ್ಯಕ್ಷ ಎಸ್.ಕೆ.ಹನೀಫ್ ಮಾಜಿ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ಜಿಲ್ಲಾ ಪಂಚಾಯತ್ ಇಂಜಿನಿಯರ್ ಮಣಿಕಂಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ,ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹನೀಫ್ ಚಟ್ಟೆಕಲ್ಲು, ಶಾಲಾ ಮುಕ್ಯೋಪಾಧ್ಯಾಯರು.ಅಧ್ಯಾಪಕರು ಉಪಸ್ಥಿತರಿದ್ದರು