ಸುಳ್ಯ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು, ಪಂಚಾಯತ್ ರಾಜ್ ಇಂಜಿನಿಯರಿಂಗ್, ಉಪ ವಿಭಾಗ, ಸುಳ್ಯ ಇದರ
ನೂತನ ಕಛೇರಿ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಜೂ.18ರಂದು ಬುಧವಾರ ಪೂ.9ಕ್ಕೆ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಉದ್ಘಾಟಿಸುವರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಗೌರವ ಉಪಸ್ಥಿತರಿರುವರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಸಭಾ ಸಂಸದರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯರಾದ ಎಸ್. ಎಲ್. ಭೋಜೇಗೌಡ, ಐವನ್ ಡಿ’ಸೋಜ, ಪ್ರತಾಪ್ ಸಿಂಹ ನಾಯಕ್ ಕೆ.,ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್ ಕುಮಾರ್ ಬಿ. ಆರ್, ನ.ಪಂ.ಅಧ್ಯಕ್ಷೆ ಶಶಿಕಲಾ ಎ., ಮುಖ್ಯ ಅತಿಥಿಗಳಾಗಿ

ಭಾಗವಹಿಸಲಿದ್ದಾರೆ. ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಂ. ರೇವಣ್ಣ,ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ,ತುಳು ಅಕಾಡೆಮಿ ಅಧ್ಯಕ್ಷ ತಾರನಾಥ್ ಗಟ್ಟಿ ಕೆ,ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮ್ಮರ್ ಯು.ಎಚ್,ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಬಿ. ಎಸ್. ಗಟ್ಟಿ,ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಕಸಾಪ ಅಧ್ಯಕ್ಷ ಡಾ.ಎಂ. ಪಿ. ಶ್ರೀನಾಥ್, ದ.ಕ. ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲ, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆನಂದ ಕೆ. ಎಸ್.ಪಿ.ಡಾ. ಅರುಣ್ ಕೆ,ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್ ಇಲಾಖೆಯ ಮುಖ್ಯ ಅಭಿಯಂತರರಾದ ಟಿ. ಡಿ. ನಂಜುಂಡಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.