ಶಿವಮೊಗ್ಗ: ರಾಜ್ಯ ಸರ್ಕಾರ ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿಯ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಪಂ. ಮತ್ತು ತಾ.ಪಂ ಚುನಾವಣೆಯ ಮೀಸಲಾತಿಯ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರವರೆಗೆ ಅವಕಾಶವಿತ್ತು. ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಕರಡು ಅಧಿಸೂಚನೆ ಹೊರಡಿಸಲಾಗುವುದು. ನಂತರ ರಾಜ್ಯ ಚುನಾವಣೆ ಆಯೋಗ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ವಿವರಿಸಿದರು.ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.









